ಸಂಖ್ಯೆ: ದೇಹಿನಿ/ಸ/ಪ್ರಕಟಣೆ/ಸಿಆರ್-18/2023-24 ದಿನಾಂಕ: 30.09.2023 ಪ್ರಕಟಣೆ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿನಲ್ಲಿ ಈ ಕೆಳಕಂಡ ಯೋಜನೆಗಳಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಸೇವಾ ಸಿಂಧು ತಂತ್ರಾಂಶದ ಮುಖಾಂತರ Online ಅರ್ಜಿ ಸ್ವೀಕೃತಿ ಡಿ. ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ ಹಿಂದುಳಿದ ವರ್ಗಕ್ಕೆ ಸೇರಿದ ನಿರುದ್ಯೋಗಿ ಫಲಾನುಭವಿಗಳು ಕೃಷಿ ಅವಲಂಬಿತ ಚಟುವಟಿಕೆ, ವ್ಯಾಪಾರ, ಕೈಗಾರಿಕೆ, ಸಾರಿಗೆ ಮತ್ತು ಸೇವಾ ವಲಯದಲ್ಲಿ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಗರಿಷ್ಠ ರೂ. 2.00 ಲಕ್ಷಗಳವರೆಗೆ ಆರ್ಥಿಕ ನೆರವು, ಕನಿಷ್ಠ ರೂ. 1.00 ಲಕ್ಷಗಳವರೆಗಿನ ಸಾಲದಲ್ಲಿ ಶೇ.20 ರಷ್ಟು ಗರಿಷ್ಠ ರೂ. 20,000/- ಗಳ ಸಹಾಯಧನ ಹಾಗೂ ಗರಿಷ್ಠ ರೂ. 1.00 ಲಕ್ಷದಿಂದ ರೂ. 2.00 ಲಕ್ಷದವರೆಗೆ ಶೇ. 15 ರಷ್ಟು ಗರಿಷ್ಠ ರೂ. 30,000/- ಸಹಾಯಧನ ಉಳಿಕೆ ಮೊತ್ತ ಶೇ. 4 ರ ಬಡ್ಡಿದರದಲ್ಲಿ ನಿಗಮದಿಂದ ನೇರ ಸಾಲ ಸೌಲಭ್ಯ ಪಡೆಯಬಯಸುವವರು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ. 98,000/- ಗಳು ಪಟ್ಟಣ ಪ್ರದೇಶದವರಿಗೆ ರೂ. 1,20,000/- ಗಳ ಒಳಗಿರಬೇಕು, ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ಮಿತಿಯಲ್ಲಿರಬೇಕು, ಪ್ರವರ್ಗ-1 ರಡಿಯಲ್ಲಿನ ಜಾತಿಗಳಲ್ಲಿ ಬರುವ ಅರ್ಜಿದಾರರು ಕನಿಷ್ಠ 7ನೇ ತರಗತಿ ಹಾಗೂ ಉಳಿದ ಇತರ ಪ್ರವರ್ಗಗಳಲ್ಲಿನ ಅರ್ಜಿದಾರರು 10ನೇ ತರಗತಿ ವಿದ್ಯಾರ್ಹತೆ ಹೊಂದಿರಬೇಕು. ಗಂಗಾ ಕಲ್ಯಾಣ ನೀರಾವರಿ ಯೋಜನೆ ಹಿಂದುಳಿದ ವರ್ಗಗಳ ಸಣ್ಣ ಮತ್ತು ಅತಿ ಸಣ್ಣ ರೈತರ ಜಮೀನುಗಳಿಗ ನೀರಾವರಿ ಸೌಲಭ್ಯ ಒದಗಿಸಲಾಗುವುದು. ವೈಯಕ್ತಿಕ ಕೊಳವೆ ಬಾವಿ ಯೋಜನೆಗೆ ಒಟ್ಟು ಘಟಕ ವೆಚ್ಚ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳಿಗೆ ರೂ. 4.75 ಲಕ್ಷ ಇದರಲ್ಲಿ ವಿದ್ಯುದ್ಧೀಕರಣ ವೆಚ್ಚ ಪ್ರತಿ ಕೊಳವೆ ಬಾವಿಗೆ ರೂ. 75,000/- ಗಳನ್ನು ಎಸ್ಕಾಂಗಳಿಗೆ ಪಾವತಿಸಲಾಗುವುದು. ಘಟಕ ಪೂರ್ಣಗೊಳಿಸಲು ಸಾಧ್ಯವಾಗದಿದ್ದಲ್ಲಿ ರೂ. 50,000/- ಗಳ ಸಾಲವನ್ನು ಶೇ. 4ರ ಬಡ್ಡಿದರದಲ್ಲಿ ಮಂಜೂರು ಮಾಡಲಾಗುವುದು. ಈ ಯೋಜನೆಯಲ್ಲಿ ಉಡುಪಿ, ದಕ್ಷಿಣ ಕನ್ನಡ, ಕೊಡಗು, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು. ಉಳಿಕೆ ಜಿಲ್ಲೆಗಳಲ್ಲಿ ಒಂದೇ ಸ್ಥಳದಲ್ಲಿ ಹೊಂದಿಕೊಂಡಂತೆ ಇರುವ ಕನಿಷ್ಠ 1 ಎಕರೆ ಜಮೀನು ಇರಬೇಕು. ಅರಿವು-ಶೈಕ್ಷಣಿಕ ಸಾಲ ಯೋಜನೆ ಈ ಯೋಜನೆಯಡಿ CET ಮೂಲಕ ಆಯ್ಕೆಯಾಗಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ಎಲ್ಲಾ ಪ್ರವರ್ಗಗಳ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸುಗಳಾದ ಇಂಜಿನಿಯರಿಂಗ್, ವೈದ್ಯಕೀಯ, ದಂತ ವೈದ್ಯಕೀಯ ಮುಂತಾದ 28 ಕೋರ್ಸ್ಗಳ ವ್ಯಾಸಂಗಕ್ಕೆ ವಾರ್ಷಿಕ 1.00 ಲಕ್ಷ ರೂ.ಗಳಂತೆ ಕೋರ್ಸ್ನ ಅವಧಿಗೆ ಗರಿಷ್ಠ 4.00 ಲಕ್ಷ ರೂ.ಗಳಿಂದ ರೂ. 5.00 ಲಕ್ಷ ರೂ.ಗಳಿಗೆ ವಾರ್ಷಿಕ ಶೇ. 2ರ ಬಡ್ಡಿದರದಲ್ಲಿ ಸಾಲ ಮಂಜೂರು ಮಾಡಲಾಗುವುದು. ಅಭ್ಯರ್ಥಿ ಮತ್ತು ಅವರ ಕುಟುಂಬದವರ ವಾರ್ಷಿಕ ವರಮಾನವು ರೂ. 3.50 ಲಕ್ಷಗಳ ಮಿತಿಯಲ್ಲಿರಬೇಕು. ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಮಾಡಲು ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಪಿಹೆಚ್.ಡಿ. ಪೋಸ್ಟ್ ಡಾಕ್ಟ್ರಲ್ ಮತ್ತು ಮಾಸ್ಟರ್ ಡಿಗ್ರಿ (ಇಂಜಿನಿಯರಿಂಗ್ & ಟೆಕ್ನಾಲಜಿ, ಮ್ಯಾನೇಜ್ಮೆಂಟ್ & ಕಾಮರ್ಸ್, ಸೈನ್ಸ್ & ಟೆಕ್ನಾಲಜಿ, ಅಗ್ರಿಕಲ್ಚರ್ & ಅಲೈಡ್ ಸೈನ್ಸಸ್ / ಟೆಕ್ನಾಲಜಿ, ಮೆಡಿಸಿನ್, ಹ್ಯುಮ್ಯಾನಿಟೀಸ್ & ಸೋಷಿಯಲ್ ಸೈನ್ಸಸ್) ವ್ಯಾಸಂಗಕ್ಕೆ ಪ್ರವೇಶ ಪಡೆದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ಆದಾಯ ಗರಿಷ್ಠ 8.00 ಲಕ್ಷ ರೂ.ಗಳ ಮಿತಿಯಲ್ಲಿರಬೇಕು. ವಿದ್ಯಾರ್ಥಿಗಳು ಅರ್ಹತಾ ಪರೀಕ್ಷೆಯಲ್ಲಿ ಶೇ. 60 ಕ್ಕಿಂತಲೂ ಹೆಚ್ಚಿನ ಅಂಕ ಪಡೆದಿರಬೇಕು. QS World Ranking 500 ರೊಳಗೆ ಬರುವ ವಿಶ್ವ ವಿದ್ಯಾನಿಲಯಗಳಲ್ಲಿ ಪ್ರವೇಶ ಪಡೆದಿರಬೇಕು. ವಾರ್ಷಿಕ ಗರಿಷ್ಠ 10.00 ಲಕ್ಷ ಹಾಗೂ ಪೂರ್ಣ ಕೋರ್ಸ್ನ ಅವಧಿಗೆ ರೂ. 20.00 ಲಕ್ಷಗಳ ಸಾಲವನ್ನು ಬಡ್ಡಿರಹಿತವಾಗಿ ಒದಗಿಸಲಾಗುವುದು. ಸಾಲದ ಭದ್ರತೆಗೆ ನಿಗಮಕ್ಕೆ ಅರ್ಜಿದಾರರ / ಜಾಮೀನುದಾರ / ಪೋಷಕರ ಸ್ಥಿರಾಸ್ತಿಯನ್ನು ನಿಗಮಕ್ಕೆ ಆಧಾರ ಮಾಡಬೇಕು. ಅರ್ಜಿಯ ಜೊತೆಯಲ್ಲಿ ವಿದೇಶಿ ವಿಶ್ವವಿದ್ಯಾಲಯದ ಪ್ರವೇಶ ಪತ್ರ (Offer Letter) ವಿದ್ಯಾರ್ಥಿಯ ವಿಸಾ ಪಾಸ್ಪೋರ್ಟ್ ಮತ್ತು ಏರ್ ಟಿಕೇಟ್ ಪ್ರತಿ ಒದಗಿಸಬೇಕು. ಈ ಯೋಜನೆಯಡಿಯಲ್ಲಿ ಸೌಲಭ್ಯ ಒದಗಿಸಲು ಸೇವಾ ಸಿಂಧು ತಂತ್ರಾಂಶದಲ್ಲಿ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸ್ವಾವಲಂಬಿ ಸಾರಥಿ ಯೋಜನೆ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಹಿಂದುಳಿದ ವರ್ಗಗಳ ನಿರುದ್ಯೋಗಿ ಯುವಜನರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸ್ವಾವಲಂಬಿ ಸಾರಥಿ ಯೋಜನೆಯಡಿ ನಾಲ್ಕು ಚಕ್ರಗಳ ವಾಹನ ಖರೀದಿಗೆ ಬ್ಯಾಂಕ್ಗಳಿಂದ ಪಡೆಯುವ ಸಾಲಕ್ಕೆ ಶೇ. 50 ರಷ್ಟು, ಗರಿಷ್ಠ ರೂ. 3.00 ಲಕ್ಷಗಳ ಸಹಾಯಧನ ಮಂಜೂರು ಮಾಡಲಾಗುವುದು. ಸೌಲಭ್ಯ ಪಡೆಯಬಯಸುವವರು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ. 98,000/- ಗಳು ಪಟ್ಟಣ ಪ್ರದೇಶದವರಿಗೆ ರೂ. 1,20,000/- ಗಳ ಒಳಗಿರಬೇಕು, ಅರ್ಜಿದಾರರ ವಯಸ್ಸು 21 ರಿಂದ 45 ವರ್ಷಗಳ ಮಿತಿಯಲ್ಲಿರಬೇಕು. ಈ ಯೋಜನೆಯಲ್ಲಿ ಆರ್ಥಿಕ ಸಹಾಯ ಪಡೆಯಲು ಇಚ್ಛಿಸುವ ಅರ್ಜಿದಾರರು ಲಘು ವಾಹನ ಚಾಲನ ಪರವಾನಗಿಯನ್ನು ಹೊಂದಿರಬೇಕು. ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ) ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಹಿಂದುಳಿದ ವರ್ಗಗಳಿಗೆ ಸೇರಿದವರಿಗೆ ಸ್ವಯಂ ಉದ್ಯೋಗ ಕಲ್ಪಿಸಿಕೊಳ್ಳಲು ಅವರು ಕೈಗೊಳ್ಳುವ ಆರ್ಥಿಕ ಚಟುವಟಿಕೆಗಳು / ಉದ್ಯಮಗಳಿಗೆ ವಾಣಿಜ್ಯ ಬ್ಯಾಂಕುಗಳ ಮೂಲಕ ಸಾಲ ಪಡೆದಲ್ಲಿ ನಿಗಮದಿಂದ ಶೇ. 20 ರಷ್ಟು ಗರಿಷ್ಠ ರೂ. 1.00 ಲಕ್ಷಗಳ ಸಹಾಯಧನ ಮಂಜೂರು ಮಾಡಲು ಉಳಿಕೆ ಮೊತ್ತವನ್ನು ಬ್ಯಾಂಕ್ನಿಂದ ಸಾಲ ಪಡೆಯುವ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ. 98,000/-ಗಳು ಪಟ್ಟಣ ಪ್ರದೇಶದವರಿಗೆ ರೂ. 1,20,000/- ಗಳ ಒಳಗಿರಬೇಕು, ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ಮಿತಿಯಲ್ಲಿರಬೇಕು. ಸ್ವಾತಂತ್ರ್ಯ ಅಮೃತ ಮಹೋತ್ಸವ ಮುನ್ನಡೆ ಯೋಜನೆ ಹಿಂದುಳಿದ ವರ್ಗಗಳ ವಿದ್ಯಾವಂತ ಯುವಜನರನ್ನು ಗುರುತಿಸಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ತರಬೇತಿಯನ್ನು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಾದ ITI’s, GTTC, KGTTI, ATDC ಗಳ ಮೂಲಕ ವಿವಿಧ ಅಲ್ಪಾವಧಿ ಮತ್ತು ಉತ್ಕೃಷ್ಟ ಕೌಶಲ್ಯ ತರಬೇತಿಯನ್ನು ನೀಡಿ ಅವರ ಉದ್ಯೋಗ ಸಾಮರ್ಥ್ಯವನ್ನು ಹಾಗೂ ಸಾಮಾಜಿಕ/ಆರ್ಥಿಕ ಸ್ಥಿತಿಗತಿಗಳನ್ನು ಉನ್ನತೀಕರಿಸುವ ನಿಟ್ಟಿನಲ್ಲಿ ಉದ್ಯೋಗಿಮುಖಿಗಳನ್ನಾಗಿಸುವುದು. ಅರ್ಹತೆಗಳು: 10ನೇ ತರಗತಿ / ದ್ವಿತೀಯ ಪಿ.ಯು.ಸಿ. / ಪದವಿ / ಇಂಜಿನಿಯರಿಂಗ್ ವ್ಯಾಸಂಗವನ್ನು ಪೂರ್ಣಗೊಳಿಸಿರಬೇಕು. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾತಿ ಪಟ್ಟಿಯಲ್ಲಿ ನಮೂದಿಸಿದ ನಿಗಮದ ವ್ಯಾಪ್ತಿಗೆ ಒಳಪಡುವ ಜಾತಿಗಳಿಗೆ ಸೇರಿದವರಾಗಿರಬೇಕು. ಅರ್ಜಿದಾರರ ವಯಸ್ಸು 18 ರಿಂದ 25 ವರ್ಷಗಳ ಒಳಗಿರಬೇಕು. ಪ್ರವರ್ಗ-1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಕುಟುಂಬದ ವಾರ್ಷಿಕ ವರಮಾನ / ಆದಾಯ ಮಿತಿ ಇರುವುದಿಲ್ಲ. ಪ್ರವರ್ಗ-2ಎ, 3ಎ ಮತ್ತು 3ಬಿಗೆ ಸೇರಿದ ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ / ಆದಾಯ ರೂ. 8.00 ಲಕ್ಷಗಳಿಗಿಂತ ಕಡಿಮೆ ಇರಬೇಕು. ಅರ್ಜಿದಾರರು http://www.kaushalkar.com ಜಾಲತಾಣದೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು. ಈ ಮೇಲ್ಕಂಡ ಎಲ್ಲಾ ಯೋಜನೆಗಳು ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಹಟ್ಟಿಗೊಲ್ಲ, ಮರಾಠ ಮತ್ತು ಇದರ ಉಪ ಸಮುದಾಯಗಳನ್ನು ಹೊರತುಪಡಿಸಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ನಲ್ಲಿ ಉಳಿದ ಸಮುದಾಯಗಳಿಗೆ ಅನ್ವಯವಾಗುತ್ತದೆ. ಈ ಮೇಲ್ಕಂಡ ಎಲ್ಲಾ ಯೋಜನೆಗಳಡಿಯಲ್ಲಿ ಸೌಲಭ್ಯ ಒದಗಿಸಲು ಸೇವಾ ಸಿಂಧು ತಂತ್ರಾAಶದಲ್ಲಿ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ನಲ್ಲಿರುವಂತೆ ಅರ್ಜಿದಾರರ ಹೆಸರು, (ಶ್ರೀ / ಶ್ರೀಮತಿ ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದು ಹೊಂದಾಣಿಕೆಯಾಗಬೇಕು. ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಮೇಲ್ಕಂಡ ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವ ಹಿಂದುಳಿದ ವರ್ಗಗಳ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ. ನಿಗಮದ ವೆಬ್ಸೈಟ್ www.dbcdc.karnataka.gov.in ಇಲ್ಲಿ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿರುತ್ತದೆ ಅಥವಾ ನಿಗಮದ ಸಹಾಯವಾಣಿ ಸಂಖ್ಯೆ: 080-22374832 ಮತ್ತು 8050770004 ಅಥವಾ 8050770005 ಆಯಾ ಜಿಲ್ಲಾ ಕಛೇರಿಯ ದೂರವಾಣಿ ಸಂಖ್ಯೆಗಳನ್ನು ವೆಬ್ಸೈಟ್ನಲ್ಲಿ ನೀಡಲಾಗಿದ್ದು ಅದರಂತೆ ಸಂಪರ್ಕಿಸಬಹುದು. ಆನ್ಲೈನ್ ಮೂಲಕ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ದಿನಾಂಕ: 31.10.2023 ರೊಳಗೆ ಸೇವಾಸಿಂಧು ತಂತ್ರಾಂಶದ ಮುಖಾಂತರ ಸಲ್ಲಿಸುವುದು. ಸೂಚನೆ:- ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಪಾವತಿಸುವಂತಿಲ್ಲ. ಸಂಬಂಧಪಟ್ಟ ಜಿಲ್ಲೆಗಳ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಕಛೇರಿಯ ಅವಧಿಯಲ್ಲಿ ಉಚಿತವಾಗಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸುವ ವ್ಯವಸ್ಥೆ ಇರುತ್ತದೆ. ಸಂಖ್ಯೆ: ಕ.ವಿ.ಲಿ.ಅ.ನಿ/ಸಿ-1/ಸಿಆರ್-14/23-24 ದಿನಾಂಕ: 30.09.2023 ಪ್ರಕಟಣೆ 2023-24ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ನಿಗಮದ ಯೋಜನೆಗಳು ವೀರಶೈವ-ಲಿಂಗಾಯತ ಜಾತಿ ಹಾಗೂ ಉಪಜಾತಿಗೆ ಸೇರಿದ ಸಮುದಾಯದ ಜನರ (ಪ್ರವರ್ಗ- IIIಬಿ) ಅಬಿವೃದ್ಧಿಗಾಗಿ 2023-24ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಈ ಕೆಳಕಂಡ ಯೋಜನೆಗಳಲ್ಲಿ ಸೌಲಭ್ಯ ಪಡೆಯಬಯಸುವವರಿಂದ ಆನ್ಲೈನ್ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30.10.2023 (ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ). 1. ಶೈಕ್ಷಣಿಕ ಸಾಲ ಯೋಜನೆಗಳು ಬಸವ ಬೆಳಗು ಯೋಜನೆ (Fresh Students) ವೀರಶೈವ-ಲಿಂಗಾಯತ ಸಮುದಾಯಕ್ಕೆ ಸೇರಿದ್ದು ಅವರ ಕುಟುಂಬದ ವಾರ್ಷಿಕ ಆದಾಯ ರೂ. 3.50 ಲಕ್ಷ ಮಿತಿಯಲ್ಲಿರುವ ವಿದ್ಯಾರ್ಥಿಗಳು ವೃತ್ತಿಪರ ಕೋರ್ಸ್ಗಳಾದ ಇಂಜಿನಿಯರಿಂಗ್, ವೈದ್ಯಕೀಯ, ದಂತ ವೈದ್ಯಕೀಯ ಮುಂತಾದ 28 ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿದ್ದಲ್ಲಿ ವಾರ್ಷಿಕ ರೂ. 1.00 ಲಕ್ಷಗಳಂತೆ ಕೋರ್ಸ್ನ ಅವಧಿಗೆ ಗರಿಷ್ಠ ರೂ. 4.00 ಲಕ್ಷಗಳಿಂದ 5.00 ಲಕ್ಷಗಳವರೆಗೆ ವಾರ್ಷಿಕ ಶೇ. 2 ರ ಬಡ್ಡಿದರದಲ್ಲಿ ಸಾಲ ಮಂಜೂರು ಮಾಡಲಾಗುವುದು. ವಿದ್ಯಾರ್ಥಿಗಳು CET/NEET ಇತ್ಯಾದಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಸರ್ಕಾರಿ ಕೋಟಾದ ಸೀಟು ಪಡೆದಿರಬೇಕು. ಬಸವ ಬೆಳಗು ಯೋಜನೆ (Renewals): 2022-23ನೇ ಸಾಲಿನಲ್ಲಿ ಸಾಲ ಪಡೆದ ವಿದ್ಯಾರ್ಥಿಗಳಿಗೆ 2ನೇ ಕಂತಿನ ನವೀಕರಣ ಸಾಲ ಮಂಜೂರು ಮಾಡಲು ವ್ಯಾಸಂಗ ದೃಢೀಕರಣ ಮತ್ತು ಹಿಂದಿನ ವರ್ಷದ ಅಂಕಪಟ್ಟಿಯೊಂದಿಗೆ ಅರ್ಜಿ ಸಲ್ಲಿಸುವುದು. ವಿದೇಶ ವಿದ್ಯಾವಿಕಾಸ ಯೋಜನೆ (Fresh Students) : ವೀರಶೈವ-ಲಿಂಗಾಯತ ಸಮುದಾಯಕ್ಕೆ ಸೇರಿದ್ದು ಅವರ ಕುಟುಂಬದ ವಾರ್ಷಿಕ ಆದಾಯ ರೂ. 8.00 ಲಕ್ಷಗಳ ಮಿತಿಯಲ್ಲಿರುವ ವಿದ್ಯಾರ್ಥಿಗಳು QS World Ranking 500 ರೊಳಗೆ ಬರುವ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಪೋಸ್ಟ್ ಡಾಕ್ಟರಲ್, ಪಿಹೆಚ್.ಡಿ., ಮಾಸ್ಟರ್ ಡಿಗ್ರಿ ಕೋರ್ಸ್ಗಳಲ್ಲಿ ಉನ್ನತ ವ್ಯಾಸಂಗ ಪಡೆಯಲು ವಾರ್ಷಿಕ ಗರಿಷ್ಠ ರೂ. 10.00 ಲಕ್ಷಗಳಂತೆ 3 ವರ್ಷದ ಅವಧಿಗೆ ಒಟ್ಟು ರೂ. 20.00 ಲಕ್ಷಗಳನ್ನು ಶೂನ್ಯ ಬಡ್ಡಿದರದಲ್ಲಿ ಸಾಲ ಮಂಜೂರು ಮಾಡಲಾಗುವುದು. ವಿದೇಶ ವಿದ್ಯಾವಿಕಾಸ ಯೋಜನೆ (Renewals): 2022-23ನೇ ಸಾಲಿನಲ್ಲಿ ಸಾಲ ಪಡೆದ ವಿದ್ಯಾರ್ಥಿಗಳಿಗೆ 2ನೇ ಕಂತಿನ ನವೀಕರಣ ಸಾಲ ಮಂಜೂರು ಮಾಡಲು ವ್ಯಾಸಂಗ ದೃಢೀಕರಣ ಮತ್ತು ಹಿಂದಿನ ವರ್ಷದ ಅಂಕಪಟ್ಟಿಯೊಂದಿಗೆ ಅರ್ಜಿ ಸಲ್ಲಿಸುವುದು. 2. ಜೀವಜಲ ಯೋಜನೆ ವೀರಶೈವ-ಲಿಂಗಾಯತ ಸಮುದಾಯಕ್ಕೆ ಸೇರಿದ್ದು, ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ. 98,000/- ಹಾಗೂ ಪಟ್ಟಣ ಪ್ರದೇಶದವರಿಗೆ ರೂ. 1.20,000/- ಮಿತಿಯೊಳಗಿರುವ ಸಣ್ಣ ಮತ್ತು ಅತಿ ಸಣ್ಣ ರೈತರ ಜಮೀನುಗಳಿಗೆ ಕೊಳವೆ ಬಾವಿ ಕೊರೆಸುವ ಮುಖೇನ ನೀರಾವರಿ ಸೌಲಭ್ಯ ಒದಗಿಸಲಾಗುವುದು. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ರಾಮನಗರ ಜಿಲ್ಲೆಗಳಿಗೆ ವೈಯಕ್ತಿಕ ಕೊಳವೆಬಾವಿ ಯೋಜನೆಗೆ ಘಟಕವೆಚ್ಚ ರೂ. 4.75 ಲಕ್ಷಗಳಲ್ಲಿ ರೂ. 4.25 ಲಕ್ಷಗಳು ಸಹಾಯಧನ, ಘಟಕ ಪೂರ್ಣಗೊಳಿಸಲು ಸಾಧ್ಯವಾಗದಿದ್ದಲ್ಲಿ ರೂ. 50,000/- ಗಳ ಸಾಲವನ್ನು ಶೇ. 4 ರ ಬಡ್ಡಿದರದಲ್ಲಿ ಮಂಜೂರು ಮಾಡಲಾಗುವುದು. ಉಳಿದ ಜಿಲ್ಲೆಗಳಿಗೆ ಘಟಕವೆಚ್ಚ ರೂ. 3.75 ಲಕ್ಷಗಳಲ್ಲಿ ರೂ. 3.25 ಲಕ್ಷ ಸಹಾಯಧನ. ಘಟಕ ಪೂರ್ಣಗೊಳಿಸಲು ಸಾಧ್ಯವಾಗದಿದ್ದಲ್ಲಿ ರೂ. 50,000/- ಗಳ ಸಾಲವನ್ನು ಶೇ. 4 ರ ಬಡ್ಡಿದರದಲ್ಲಿ ಮಂಜೂರು ಮಾಡಲಾಗುವುದು. ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು. ಇತರೆ ಜಿಲ್ಲೆಗಳಲ್ಲಿ ಕನಿಷ್ಠ 2 ಎಕರೆ ಹಾಗೂ ಗರಿಷ್ಠ 5 ಎಕರೆ ಒಳಗೆ ಜಮೀನು ಹೊಂದಿರಬೇಕು. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ Farmer’s FRUIT ID ಮತ್ತು ಸಣ್ಣ ಹಿಡುವಳಿದಾರರ ಪ್ರಮಾಣ ಪತ್ರ ಹೊಂದಿರಬೇಕು. 3. ಕಾಯಕಕಿರಣ ಯೋಜನೆ ವೀರಶೈವ-ಲಿಂಗಾಯತ ಸಮುದಾಯದ ನಿರುದ್ಯೋಗಿಗಳು ಸ್ವಯಂ ಉದ್ಯೋಗ ಕೈಗೊಳ್ಳಲು ಆರ್ಥಿಕ ಚಟುವಟಿಕೆಗಳಿಗನುಸಾರ ಈ ಕೆಳಕಂಡಂತೆ ಸಾಲ ಮತ್ತು ಸಹಾಯಧನ ಸೌಲಭ್ಯ ಒದಗಿಸಲಾಗುವುದು.
4. ಭೋಜನಾಲಯ ಕೇಂದ್ರ ಸಮುದಾಯದ ಜನರು ಹೋಟೆಲ್ (ಖಾನಾವಳಿ) ಉದ್ಯಮ ಕೈಗೊಳ್ಳಲು ಈ ಯೋಜನೆಯಲ್ಲಿ ಸಾಲ ಮತ್ತು ಸಹಾಯಧನ ನೀಡಲಾಗುವುದು. ಹೋಟೆಲ್ ಉದ್ದಿಮೆ ಕೈಗೊಳ್ಳಲು ಘಟಕ ವೆಚ್ಚ ರೂ. 5.00 ಲಕ್ಷ ಇದರಲ್ಲಿ ರೂ. 4,60,000/- ಸಾಲ ಮತ್ತು ರೂ. 40,000/- ಸಹಾಯಧನ ನೆರವು ನೀಡಲಾಗುವುದು. ಹೋಟೆಲ್ ಸ್ಥಾಪನೆ ಮಾಡಲು ಫಲಾನುಭವಿಗಳು ತಮ್ಮ ಸ್ವಂತ ಹೆಸರಿನಲ್ಲಿ ಕನಿಷ್ಠ 20x30 ಅಡಿ ಅಳತೆಯುಳ್ಳ ನಿವೇಶನ ಹೊಂದಿರಬೇಕು. 5. ವಿಭೂತಿ ನಿರ್ಮಾಣ ಘಟಕ ವೀರಶೈವ-ಲಿಂಗಾಯತ ಸಮುದಾಯದವರು ವಿಭೂತಿಯನ್ನು ತಯಾರಿಸಲು ಸಾಲ ಮತ್ತು ಸಹಾಯಧನ ನೀಡುವ ಯೋಜನೆ ಇದಾಗಿದೆ. ಕುಟುಂಬದ ವಾರ್ಷಿಕ ವರಮಾನ ರೂ. 3.50 ಲಕ್ಷಗಳು ಮತ್ತು 18 ರಿಂದ 55 ವರ್ಷಗಳ ವಯೋಮಿತಿಯಲ್ಲಿರುವವರು ಅರ್ಜಿ ಸಲ್ಲಿಸಬಹುದು. ವಿಭೂತಿ ನಿರ್ಮಾಣ ಘಟಕ ನಿರ್ಮಿಸಲು ಘಟಕ ವೆಚ್ಚ. ರೂ. 4.00 ಲಕ್ಷ ಇದರಲ್ಲಿ ರೂ. 3,60,000/- ಸಾಲ ಮತ್ತು ರೂ. 40,000/- ಸಹಾಯಧನ ವಾರ್ಷಿಕ ಶೇ. 3%ರ ಬಡ್ಡಿದರದಲ್ಲಿ ನೆರವು ನೀಡಲಾಗುವುದು. 6. ಸ್ವಾವಲಂಬಿ ಸಾರಥಿ ಯೋಜನೆ : (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ) ನಿರುದ್ಯೋಗಿ ಚಾಲಕರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸ್ವಾವಲಂಬಿ ಸಾರಥಿ ಯೋಜನೆಯಡಿ ನಾಲ್ಕು ಚಕ್ರ ವಾಹನ (ಹಳದಿ ಬೋರ್ಡ್) ಖರೀದಿಗೆ ಪಡೆಯುವ ಸಾಲಕ್ಕೆ ಶೇ. 50 ರಷ್ಟು ಅಥವಾ ಗರಿಷ್ಠ 3.00 ಲಕ್ಷಗಳ ಸಹಾಯಧನವನ್ನು ನಿಗಮದಿಂದ ಮಂಜೂರು ಮಾಡಲಾಗುವುದು. ಫಲಾನುಭವಿಗಳು ಉಳಿದ ಮೊತ್ತವನ್ನು ಬ್ಯಾಂಕ್ / ಹಣಕಾಸು ಸಂಸ್ಥೆಗಳ ಮೂಲಕ ಅವರು ವಿಧಿಸುವ ಚಾಲ್ತಿ ಬಡ್ಡಿದರದಲ್ಲಿ ಸಾಲ ಪಡೆಯುವುದು. 7. ಸ್ವಯಂ ಉದ್ಯೋಗ ಸಾಲ ಯೋಜನೆ : (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ) ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗ ಕಲ್ಪಿಸಿಕೊಳ್ಳಲು ಅವರು ಕೈಗೊಳ್ಳುವ ಕೃಷಿ / ಕೃಷಿ ಅವಲಂಬಿತ ಚಟುವಟಿಕೆಗಳು, ವ್ಯಾಪಾರ, ಸಾರಿಗೆ ಮತ್ತು ಯಂತ್ರೋಪಕರಣಗಳನ್ನು ಕೊಳ್ಳುವ ಆರ್ಥಿಕ ಚಟುವಟಿಕೆಗಳು/ಉದ್ಯಮಗಳಿಗೆ ವಾಣಿಜ್ಯ ಬ್ಯಾಂಕ್ಗಳ ಮೂಲಕ ಸಾಲ ಪಡೆದಿದ್ದಲ್ಲಿ ನಿಗಮದಿಂದ ಶೇ. 20 ರಷ್ಟು ಅಥವಾ ಗರಿಷ್ಠ ರೂ. 1.00 ಲಕ್ಷಗಳ ಸಹಾಯಧನ ಮಂಜೂರು ಮಾಡಲಾಗುವುದು. ವಿಶೇಷ ಸೂಚನೆ
ಹೆಚ್ಚಿನ ಮಾಹಿತಿಗಾಗಿ ನಿಗಮದ ಜಾಲತಾಣ http://kvldcl.karnataka.gov.in ಅಥವಾ ನಿಗಮದ ದೂರವಾಣಿ ಸಂಖ್ಯೆ 080-22865522 / 9900012351 ಅನ್ನು ಸಂಪರ್ಕಿಸಬಹುದು. ಅಥವಾ ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಚೇರಿಗಳನ್ನು ಸಂಪರ್ಕಿಸಬಹುದಾಗಿದೆ. ಸಂಖ್ಯೆ: ಕ.ಮ.ಸ.ಅ.ನಿ/ಸಿಆರ್-53/2023-24 ದಿನಾಂಕ: 27.09.2023 ಪ್ರಕಟಣೆ 2023-24ನೇ ಸಾಲಿಗೆ ಸಾಲ-ಸೌಲಭ್ಯ ಒದಗಿಸಲು ಅರ್ಜಿಗಳ ಆಹ್ವಾನ ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿನಲ್ಲಿ ಈ ಕೆಳಕಂಡ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಹಾಗೂ ಈ ಯೋಜನೆಗಳಡಿ ಸಾಲ-ಸೌಲಭ್ಯವನ್ನು ಪಡೆಯಲು ಇಚ್ಛಿಸುವವರು ಕಡ್ಡಾಯವಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿರುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30.10.2023. (ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆ ದಿನಾಂಕ ಇರುವುದಿಲ್ಲ). ಅರ್ಜಿ ಸಲ್ಲಿಸಲು ಇರಬೇಕಾದ ಸಾಮಾನ್ಯ ಅರ್ಹತೆಗಳು 1) ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ (ನಿ.) ದ ವತಿಯಿಂದ ಎಲ್ಲಾ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಪ್ರವರ್ಗ-3-ಬಿ ಅಡಿಯಲ್ಲಿ 2(ಎ) ಯಿಂದ 2(ಎಫ್) ವರೆಗೆ ಬರುವ ಸಮುದಾಯಕ್ಕೆ ಸೇರಿರಬೇಕು. 2) ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-3ಬಿ ಯಲ್ಲಿ ಪಡೆದಿರಬೇಕು (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು), 3) ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು, 4) ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು, 5) ಸರ್ಕಾರಿ ಸೌಲಭ್ಯವನ್ನು (ಸಾಲ-ಸಹಾಯಧನ) ಪಡೆಯುವ ಸಂಬಂಧ ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಸಿರಬೇಕು, 6) ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ. 33%, ವಿಕಲಚೇತನರಿಗೆ ಶೇ.5% ಹಾಗೂ ತೃತೀಯ ಲಿಂಗಗಳಿಗೆ ಶೇ. 1% ಮೀಸಲಾತಿ ಇರಿಸಿದೆ, 7) ಒಂದು ಕುಟುಂಬದಲ್ಲಿ ಒಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ. (ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಮಾತ್ರ ಇಬ್ಬರಿಗೆ ಅವಕಾಶವಿರುತ್ತದೆ.) 1. ಶ್ರೀ ಶಹಜೀರಾಜೇ ಸಮೃದ್ಧಿ ಯೋಜನೆ (ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ) ಯೋಜನೆಯ ಅರ್ಹತೆಗಳು: 1) ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ರೂ. 98,000/- ಮತ್ತು ನಗರ ಪ್ರದೇಶದವರಿಗೆ ರೂ. 1,20,000/- ಗಳ ಮಿತಿಯೊಳಗಿರಬೇಕು. 2) ಅರ್ಜಿದಾರರು 18 ವರ್ಷ ಮೇಲ್ಪಟ್ಟು 55 ವರ್ಷದ ಒಳಗಿನವರಾಗಿರಬೇಕು. 3) ಕನಿಷ್ಠ 10ನೇ ತರಗತಿ ಉತ್ತೀರ್ಣರಾಗಿರಬೇಕು. 4) ಈ ಯೋಜನೆಯಲ್ಲಿ ಕನಿಷ್ಠ ರೂ. 1,00,000/- ಗಳಿಂದ ಗರಿಷ್ಠ ರೂ. 2,00,000/- ಗಳ ಸಾಲ ಒದಗಿಸಲಾಗುವುದು. ಈ ಮೊತ್ತದಲ್ಲಿ ಶೇ. 15% ರಷ್ಟು ಕನಿಷ್ಠ ರೂ. 20,000/- ಗಳಿಂದ ಗರಿಷ್ಠ ರೂ. 30,000/- ಗಳವರೆಗೆ ಸಹಾಯಧನ ಹಾಗೂ ಶೇ. 85ರಷ್ಟು ಸಾಲವನ್ನು ವಾರ್ಷಿಕ ಶೇ. 4 ರ ಬಡ್ಡಿ ದರದಲ್ಲಿ ಮಂಜೂರು ಮಾಡಲಾಗುವುದು, 2 ತಿಂಗಳ ವಿರಾಮ ಅವಧಿ ಇರುತ್ತದೆ ನಂತರ ಸಾಲವನ್ನು 34 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು. 2. ಜೀಜಾವು-ಜಲಭಾಗ್ಯ ಯೋಜನೆಯ (ಗಂಗಾ ಕಲ್ಯಾಣ ನೀರಾವರಿ ಯೋಜನೆ) ಅರ್ಹತೆಗಳು 1) ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ರೂ. 98,000/- ಗಳ ಮಿತಿಯೊಳಗಿರಬೇಕು. 2) ಅರ್ಜಿದಾರರು 18 ವರ್ಷ ಮೇಲ್ಪಟ್ಟಿರಬೇಕು. 3) ಒಂದೇ ಸ್ಥಳದಲ್ಲಿ ಹೊಂದಿಕೊಂಡಂತೆ ಕನಿಷ್ಠ 2 ಎಕರೆ ಹಾಗೂ ಗರಿಷ್ಠ 5 ಎಕರೆ ಜಮೀನು ಹೊಂದಿರಬೇಕು. 4) ಉಡುಪಿ, ದಕ್ಷಿಣ ಕನ್ನಡ, ಕೊಡಗು, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು. 5) ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿಲ್ಲದೆ ಇರುವ ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕು. 6) ಈ ಯೋಜನೆಯಲ್ಲಿ ಘಟಕ ವೆಚ್ಚ ರೂ. 3.75 ಲಕ್ಷಗಳು (ವಿದ್ಯುದ್ಧೀಕರಣ ಸೇರಿ) ಹಾಗೂ ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾ. ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಘಟಕ ವೆಚ್ಚ ರೂ. 4.75 ಲಕ್ಷಗಳು. (ವಿದ್ಯುದ್ಧೀಕರಣ ಸೇರಿ) ಹಾಗೂ ಅವಶ್ಯವಿದ್ದಲ್ಲಿ ರೂ. 50,000/- ಗಳ ಸಾಲವನ್ನು ಶೇ. 4 ಬಡ್ಡಿದರದಲ್ಲಿ ಮಂಜೂರು ಮಾಡಲಾಗುವುದು. 3. ಶೈಕ್ಷಣಿಕ ಸಾಲ ಯೋಜನೆಗಳು: Fresh Students
4. ಮರಾಠ ಮಿಲ್ಟ್ರಿ ಹೋಟೆಲ್ ಯೋಜನೆಯ ಅರ್ಹತೆಗಳು: 1) ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮೀಣ ಪ್ರದೇಶ ಮತ್ತು ನಗರ ಪ್ರದೇಶದವರಿಗೆ ರೂ. 8.00 ಲಕ್ಷಗಳು ಮೀರತಕ್ಕದಲ್ಲ. 2) ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷಗಳು ಹಾಗೂ ಗರಿಷ್ಠ 55 ವರ್ಷಗಳನ್ನು ಮೀರಿರತಕ್ಕದ್ದಲ್ಲ. 3) ಈ ಯೋಜನೆಯ ಘಟಕ ವೆಚ್ಚ ಗರಿಷ್ಠ ರೂ. 5.00 ಲಕ್ಷ ಸಾಲ, ರೂ. 40,000/- ಸಹಾಯಧನ ಆಗಿರುತ್ತದೆ. 4) ಸಾಲವನ್ನು ವಾರ್ಷಿಕ ಶೇ. 4 ರ ಬಡ್ಡಿ ದರದಲ್ಲಿ ಮಂಜೂರು ಮಾಡಲಾಗುವುದು. 5) 03 ವರ್ಷಗಳಲ್ಲಿ ಮಾಸಿಕ ಕಂತುಗಳಲ್ಲಿ ಮಂಜೂರಾತಿ ಆದೇಶದಲ್ಲಿ ನಿಗದಿಪಡಿಸಿರುವಂತೆ ಅಸಲು ಮತ್ತು ಬಡ್ಡಿಯನ್ನು ಮರುಪಾವತಿಸುವುದು. 5. ಸ್ವಯಂ ಉದ್ಯೋಗ ಸಾಲ ಯೋಜನೆಯ (ವಾಣಿಜ್ಯ ಬ್ಯಾಂಕ್ಗಳ ಸಹಯೋಗದೊಂದಿಗೆ) ಅರ್ಹತೆಗಳು: 1) ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ರೂ. 98,000/- ಮತ್ತು ನಗರ ಪ್ರದೇಶದವರಿಗೆ ರೂ. 1,20,000/- ಗಳ ಮಿತಿಯೊಳಗಿರಬೇಕು. 2) ಅರ್ಜಿದಾರರು 18 ವರ್ಷ ಮೇಲ್ಪಟ್ಟು 55 ವರ್ಷದ ಒಳಗಿನವರಾಗಿರಬೇಕು. 3) ಈ ಯೋಜನೆಯಡಿ ಉದ್ಯೋಗ ಪ್ರಾರಂಭಿಸಲು ಬ್ಯಾಂಕ್/ಸಹಕಾರಿ ಸಂಘಗಳಿಂದ ಸಾಲ ಪಡೆಯಬೇಕು ಹಾಗೂ ನಿಗಮದಿಂದ ಶೇ. 20 ರಷ್ಟು ಅಥವಾ ಗರಿಷ್ಠ ರೂ. 3.00 ಲಕ್ಷಗಳನ್ನು ನಿಗಮದಿಂದ ಸಹಾಯಧನ ಮಂಜೂರು ಮಾಡಲಾಗುವುದು. 4) ಬ್ಯಾಂಕ್ಗಳು ಮಂಜೂರು ಮಾಡುವ ಸಾಲಕ್ಕೆ ಬ್ಯಾಂಕ್ಗಳು ಚಾಲ್ತಿಯಲ್ಲಿರುವ ಬಡ್ಡಿಯನ್ನು ವಿಧಿಸಲಾಗುತ್ತದೆ. 6. ಸ್ವಾವಲಂಬಿ ಸಾರಥಿ ಯೋಜನೆಯ ಅರ್ಹತೆಗಳು: 1) ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ರೂ. 98,000/- ಮತ್ತು ನಗರ ಪ್ರದೇಶದವರಿಗೆ ರೂ. 1,20,000/- ಗಳ ಮಿತಿಯೊಳಗಿರಬೇಕು. 2) ಅರ್ಜಿದಾರರು 21 ವರ್ಷ ಮೇಲ್ಪಟ್ಟು 45 ವರ್ಷದ ಒಳಗಿನವರಾಗಿರಬೇಕು. 3) ಈ ಯೋಜನೆಯಲ್ಲಿ ಆರ್ಥಿಕ ಸಹಾಯ ಪಡೆಯಲು ಇಚ್ಛಿಸುವ ಅರ್ಜಿದಾರರು ಲಘುವಾಹನ ಚಾಲನಾ ಪರವಾನಿಗೆಯನ್ನು ಹೊಂದಿರಬೇಕು. 4) ಅರ್ಜಿದಾರರು ನಿರುದ್ಯೋಗಿಯಾಗಿರಬೇಕು. 5) ಈ ಯೋಜನೆಯಲ್ಲಿ ಸೌಲಭ್ಯ ಪಡೆಯುವ ಫಲಾನುಭವಿಯು ಸ್ವಯಂ ಟ್ಯಾಕ್ಸಿ ಚಾಲನೆ (Yellow Board) ಉದ್ದೇಶಕ್ಕೆ ವಾಹನವನ್ನು ನೋಂದಾಯಿಸತಕ್ಕದ್ದು. 6) ಸ್ವಾವಲಂಬಿ ಸಾರಥಿ ಯೋಜನೆಯಡಿ ನಾಲ್ಕು ಚಕ್ರಗಳ ವಾಹನವನ್ನು (ಟ್ಯಾಕ್ಸಿ, ಟಾಟಾ ಎಸಿ, ಗೂಡ್ಸ್ ವಾಹನ ಇತ್ಯಾದಿ ನಾಲ್ಕು ಚಕ್ರಗಳ ವಾಹನ) ಖರೀದಿಸಲು ಬ್ಯಾಂಕ್ / ಹಣಕಾಸು ಸಂಸ್ಥೆಗಳು ಮಂಜೂರು ಮಾಡಿದ ಸಾಲದ ಶೇ. 50 ರಷ್ಟು ಅಥವಾ ಗರಿಷ್ಠ ರೂ. 3.00 ಲಕ್ಷಗಳವರೆಗೆ ಇವುಗಳಲ್ಲಿ ಯಾವುದು ಕಡಿಮೆಯೋ ಅಷ್ಟು ಸಹಾಯಧನವನ್ನು ನಿಗಮದಿಂದ ಮಂಜೂರು ಮಾಡುವುದು. ಉಳಿದ ಮೊತ್ತವನ್ನು ಬ್ಯಾಂಕ್ / ಹಣಕಾಸು ಸಂಸ್ಥೆಗಳಿಂದ ಸಾಲದ ರೂಪದಲ್ಲಿ ಪಡೆಯುವುದು ಈ ಸಾಲಕ್ಕೆ ಬ್ಯಾಂಕ್ / ಹಣಕಾಸು ಸಂಸ್ಥೆಗಳು ನಿಗದಿಪಡಿಸುವ ಬಡ್ಡಿಯನ್ನು ಪಾವತಿಸಬೇಕು. 7. ಸ್ವಾತಂತ್ರ್ಯ ಅಮೃತ್ ಮಹೋತ್ಸವ ಮುನ್ನಡೆ ಯೋಜನೆಯ ಅರ್ಹತೆಗಳು: ಮರಾಠ ಸಮುದಾಯದ ಯುವಜನತೆಯನ್ನು ಕೌಶಲ್ಯ ಅಭಿವೃದ್ಧಿಪಡಿಸಿ ಉದ್ಯೋಗಮುಖಿಗಳನ್ನಾಗಿಸಲು ಸರ್ಕಾರದ ಸಂಸ್ಥೆಗಳಾದ ITI’s, GTTCs, KGTTIs ಇತ್ಯಾದಿಗಳಲ್ಲಿ ಅಲ್ಪಾವಧಿ ಕೋರ್ಸುಗಳ ಮೂಲಕ ಕೌಶಲ್ಯ ಅಭಿವೃದ್ಧಿ ತರಬೇತಿ ನೀಡಲು ಕೌಶಲ್ಯ ಕರ್ನಾಟಕ ತಂತ್ರಾಂಶದ (https://www.kaushalkar.com) ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ವಿಶೇಷ ಸೂಚನೆ
ಸಂಪರ್ಕ ವಿವರ: ನಿಗಮದ ಸಹಾಯವಾಣಿ: 8867537799 / ದೂ. ಸಂ: 080-29903994 (ಬೆಳಿಗ್ಗೆ: 10.00 ರಿಂದ ಸಂಜೆ: 5.30 ರವರೆಗೆ ಸಂಪರ್ಕಿಸಬಹುದಾಗಿದೆ). ಯೋಜನೆಗಳ ಮಾರ್ಗಸೂಚಿಗಳು, ಸಲ್ಲಿಸಬೇಕಾದ ದಾಖಲೆಗಳು, ಜಿಲ್ಲಾ ವ್ಯವಸ್ಥಾಪಕರ ಕಛೇರಿ ವಿಳಾಸಗಳನ್ನು ಹಾಗೂ ಹೆಚ್ಚಿನ ವಿವರಗಳನ್ನು https://kmcdc.karnataka.gov.in ಇಲ್ಲಿ ತಿಳಿಯಬಹುದಾಗಿದೆ. ಸಂಖ್ಯೆ: ಕವಿಸಅನಿ/ಸಿ.ಆರ್-01/2023-24 ದಿನಾಂಕ: 01/10/2023. ಪ್ರಕಟಣೆ 2023-24ನೇ ಸಾಲಿಗೆ ಅನುಷ್ಠಾನಗೊಂಡಿರುವ ಯೋಜನೆಗಳಿಗೆ ಅರ್ಜಿಗಳ ಆಹ್ವಾನ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿನಲ್ಲಿ ಈ ಕೆಳಕಂಡ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಹಾಗೂ ಈ ಯೋಜನೆಗಳಡಿ ಸಹಾಯಧನ / ಸಾಲ-ಸೌಲಭ್ಯವನ್ನು ಪಡೆಯಲು ಇಚ್ಛಿಸುವವರು ಕಡ್ಡಾಯವಾಗಿ ಆನ್ಲೈನ್ ಮೂಲಕ ಸೇವಾಸಿಂಧು ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಬೇಕಾಗಿರುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31.10.2023. (ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ) ಅರ್ಜಿ ಸಲ್ಲಿಸಲು ಇರಬೇಕಾದ ಸಾಮಾನ್ಯ ಅರ್ಹತೆಗಳು. 1) ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳಾಗಿರಬೇಕು. 2) ನಿಗಮದ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವವರು ಸರ್ಕಾರದ ಆದೇಶ ಸಂಖ್ಯೆ: ಸಕಇ/225/ಬಿಸಿಎ/2000 ದಿನಾಂಕ: 30/03/2002 ರನ್ವಯ ವಿಶ್ವಕರ್ಮ ಸಮುದಾಯ ಹಾಗೂ ಅದರ ಉಪಜಾತಿಗಳಿಗೆ ಸೇರಿರಬೇಕು. 3) ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ. 4) ವಯೋಮಿತಿ 18 ವರ್ಷಗಳಿಂದ 55 ವರ್ಷಗಳ ಮಿತಿಯಲ್ಲಿರಬೇಕು. 5) ನಿಗಮದ/ಸರ್ಕಾರದ ಯಾವುದಾದರೂ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು. 6) ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು. 7) ಅರಿವು ಯೋಜನೆಯಡಿ ವಯೋಮಿತಿ 18 ವರ್ಷಗಳಿಂದ 30 ವರ್ಷಗಳ ಮಿತಿಯಲ್ಲಿರಬೇಕು ವಾರ್ಷಿಕ ವರಮಾನ ರೂ. 3.50/- ಲಕ್ಷಗಳು. 8) ಸ್ವಾವಲಂಬಿ ಸಾರಥಿ ಯೋಜನೆಯಡಿ ಅರ್ಜಿದಾರರು 21 ವರ್ಷ ಮೇಲ್ಪಟ್ಟು 45 ವರ್ಷದ ಮಿತಿಯಲ್ಲಿರಬೇಕು. 9) ಅರ್ಜಿದಾರರು ತಮ್ಮ ಮೊಬೈಲ್ ಸಂಖ್ಯೆಯನ್ನು ಹಾಗೂ ಬ್ಯಾಂಕ್ ಖಾತೆಯನ್ನು ತಮ್ಮ ಆಧಾರ್ ಸಂಖ್ಯೆಗೆ ಜೋಡಣೆ ಮಾಡಿರಬೇಕು. 10) ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ರೂ. 98,000/- ಮತ್ತು ನಗರ ಪ್ರದೇಶದವರಿಗೆ ರೂ. 1,20,000/- ಗಳ ಮಿತಿಯೊಳಗಿರಬೇಕು. 11) ಆಯ್ಕೆ ಮಾಡುವಾಗ ಮಹಿಳೆಯರಿಗೆ 33% ವಿಕಲಚೇತನರಿಗೆ 5% ಹಾಗೂ ತೃತೀಯ ಲಿಂಗಿಗಳಿಗೆ ಶೇ 1% ಮೀಸಲಾತಿ ಇರಿಸಿದೆ. ರಾಜ್ಯ ಸರ್ಕಾರದ/ನಿಗಮದ ಯೋಜನೆಗಳ ವಿವರ:- ಆನ್ಲೈನ್ ಮೂಲಕ ಅರ್ಜಿ ಸ್ವೀಕರಿಸುವ ಯೋಜನೆಗಳು:- (1) ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, (2) ಸ್ವಯಂ ಉದ್ಯೋಗ ನೇರಸಾಲ ಯೋಜನೆ. (3) ಅರಿವು-ಶೈಕ್ಷಣಿಕ ನೇರಸಾಲ ಯೋಜನೆ (ಹೊಸದು). (4) ಅರಿವು-ಶೈಕ್ಷಣಿಕ ನೇರಸಾಲ ಯೋಜನೆ (ನವೀಕರಣ). (5) ಗಂಗಾ ಕಲ್ಯಾಣ ಯೋಜನೆ – ಈ ಯೋಜನೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು ಇತರೇ ಜಿಲ್ಲೆಗಳಲ್ಲಿ ಕನಿಷ್ಠ 2 ಎಕರೆ ಹೊಂದಿರಬೇಕು. (6) ಸ್ವಯಂ ಉದ್ಯೋಗ ನೇರಸಾಲ (ಬ್ಯಾಂಕ್ಗಳ ಸಹಯೋಗದೊಂದಿಗೆ). (7) ಸ್ವಾವಲಂಬಿ ಸಾರಥಿ ಯೋಜನೆ. (8) ವಿದೇಶಿ ವ್ಯಾಸಂಗ ಯೋಜನೆ-ಈ ಯೋಜನೆಯಡಿ ವಾರ್ಷಿಕ ವರಮಾನವು ರೂ. 8.00/- ಲಕ್ಷಗಳ ಮಿತಿಯಲ್ಲಿರಬೇಕು. (9) ಸ್ವಾತಂತ್ರ್ಯ ಅಮೃತ ಮುನ್ನಡೆ ಯೋಜನೆ-ಈ ಯೋಜನೆಯಡಿ ಅರ್ಜಿಯನ್ನು www.kaushalkar.com ನಲ್ಲಿ ಸಲ್ಲಿಸಬೇಕು.
ಸೇವಾಸಿಂಧು ತಂತ್ರಾಂಶದ ಮೂಲಕ ಅರ್ಜಿಗಳನ್ನು ಸಲ್ಲಿಸಲುಯ ಕೊನೆಯ ದಿನಾಂಕ: 31/10/2023ರ ನಂತರ ಬರುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಡಿ ದೇವರಾಜ ಅರಸು ನಿಗಮ ಸ್ವಯಂ ಉದ್ಯೋಗ ಸಾಲ ಯೋಜನೆ (ವ್ಯಾಪಾರ ಚಟುವಟಿಕೆ)
ಗಂಗಾ ಕಲ್ಯಾಣ ಯೋಜನೆ
ಸ್ವಾವಲಂಬಿ ಸಾರಥಿ ಯೋಜನೆ
ಉಪ್ಪಾರ ಅಭಿವೃದ್ಧಿ ನಿಗಮ ಸ್ವಯಂ ಉದ್ಯೋಗ ಸಾಲ ಯೋಜನೆ (ವ್ಯಾಪಾರ ಚಟುವಟಿಕೆ)
ಗಂಗಾ ಕಲ್ಯಾಣ ಯೋಜನೆ
ಸ್ವಾವಲಂಬಿ ಸಾರಥಿ ಯೋಜನೆ
ವೀರಶೈವ ಲಿಂಗಾಯತ ನಿಗಮ ಸ್ವಯಂ ಉದ್ಯೋಗ ಸಾಲ ಯೋಜನೆ (ವ್ಯಾಪಾರ ಚಟುವಟಿಕೆ)
ಗಂಗಾ ಕಲ್ಯಾಣ ಯೋಜನೆ
ಸ್ವಾವಲಂಬಿ ಸಾರಥಿ ಯೋಜನೆ
ವಕ್ಕಲಿಗ ಅಭಿವೃದ್ಧಿ ನಿಗಮ ಸ್ವಯಂ ಉದ್ಯೋಗ ಸಾಲ ಯೋಜನೆ (ವ್ಯಾಪಾರ ಚಟುವಟಿಕೆ)
ಗಂಗಾ ಕಲ್ಯಾಣ ಯೋಜನೆ
ಸ್ವಾವಲಂಬಿ ಸಾರಥಿ ಯೋಜನೆ
ವಿಶ್ವಕರ್ಮ ಸಮುದಾಯ ನಿಗಮ ಸ್ವಯಂ ಉದ್ಯೋಗ ಸಾಲ ಯೋಜನೆ (ವ್ಯಾಪಾರ ಚಟುವಟಿಕೆ)
ಗಂಗಾ ಕಲ್ಯಾಣ ಯೋಜನೆ
ಸ್ವಾವಲಂಬಿ ಸಾರಥಿ ಯೋಜನೆ
ಸವಿತಾ ಸಮಾಜ ನಿಗಮ ಸ್ವಯಂ ಉದ್ಯೋಗ ಸಾಲ ಯೋಜನೆ (ವ್ಯಾಪಾರ ಚಟುವಟಿಕೆ)
ಗಂಗಾ ಕಲ್ಯಾಣ ಯೋಜನೆ
ಸ್ವಾವಲಂಬಿ ಸಾರಥಿ ಯೋಜನೆ
ಮರಾಠ ನಿಗಮ ಸ್ವಯಂ ಉದ್ಯೋಗ ಸಾಲ ಯೋಜನೆ (ವ್ಯಾಪಾರ ಚಟುವಟಿಕೆ)
ಗಂಗಾ ಕಲ್ಯಾಣ ಯೋಜನೆ
ಸ್ವಾವಲಂಬಿ ಸಾರಥಿ ಯೋಜನೆ
ಮಡಿವಾಳ ಮಾಚಿದೇವ ನಿಗಮ ಸ್ವಯಂ ಉದ್ಯೋಗ ಸಾಲ ಯೋಜನೆ (ವ್ಯಾಪಾರ ಚಟುವಟಿಕೆ)
ಗಂಗಾ ಕಲ್ಯಾಣ ಯೋಜನೆ
ಸ್ವಾವಲಂಬಿ ಸಾರಥಿ ಯೋಜನೆ
ಕರ್ನಾಟಕ ಅಲೆಮಾರಿ ನಿಗಮ ಸ್ವಯಂ ಉದ್ಯೋಗ ಸಾಲ ಯೋಜನೆ (ವ್ಯಾಪಾರ ಚಟುವಟಿಕೆ)
ಗಂಗಾ ಕಲ್ಯಾಣ ಯೋಜನೆ
ಸ್ವಾವಲಂಬಿ ಸಾರಥಿ ಯೋಜನೆ
0 Comments
Leave a Reply. |
Categories
All
RAMESHA NIRATANKA ಉಲ್ಲಾಳು ವಾರ್ಡಿನ ಸಮಸ್ತ ನಾಗರೀಕರನ್ನು ಒಂದೇ ವೇದಿಕೆಯಡಿಯಲ್ಲಿ ತರಲು ಪ್ರಯತ್ನಿಸಲಾಗುತ್ತಿದೆ. ಈಗಾಗಲೇ ಸಮಾಜದ ವಿವಿಧ ಕ್ಷೇತ್ರದ 50,000 ಕ್ಕೂ ಹೆಚ್ಚು ಸದಸ್ಯರು ನಿರಾತಂಕ ಸ್ವಯಂ ಸೇವಾ ಸಂಸ್ಥೆಯೊಂದಿಗೆ ಒಡನಾಟದಲ್ಲಿದ್ದಾರೆ. ಹಲವಾರು ಸಮಾಜ ಸೇವಾ ಕಾರ್ಯಗಳಲ್ಲಿ ನಿರಾತಂಕ ಸಂಸ್ಥೆಗೆ ಬೆಂಬಲವನ್ನು ನೀಡುತ್ತಿದ್ದಾರೆ. ತಾವೂ ಕೂಡ ನಮ್ಮೊಂದಿಗೆ ಕೈ ಜೋಡಿಸಲು ಮತ್ತು ಬೆಂಬಲಿಸಲು “8088433026” ನಂಬರ್ಗೆ “NIRATHANKA” ಎಂದು ಸಂದೇಶವನ್ನು ಕಳುಹಿಸಿಕೊಡಬಹುದು.
|