ದಿನಾಂಕ: 16-09-2023 ಶನಿವಾರದಂದು ಯಶವಂತಪುರ ವಿಧಾನಸಭಾ ಕ್ಷೇತ್ರದ ಉಲ್ಲಾಳು ವಾರ್ಡ್-29ರಲ್ಲಿ ಗೌರಿ ಗಣೇಶ ಹಬ್ಬದ ಪ್ರಯುಕ್ತ ನಿರಾತಂಕ ಸ್ವಯಂ ಸೇವಾ ಸಂಸ್ಥೆಯ ವತಿಯಿಂದ 'ಮಕ್ಕಳ ಕೈಯಲ್ಲಿ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿಗಳನ್ನು ತಯಾರಿಸುವ ಸ್ಪರ್ಧೆ'ಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಪ್ರಥಮ ಬಹುಮಾನ ರೂ. 5,000, ದ್ವಿತೀಯ ಬಹುಮಾನ ರೂ.2,500 ಹಾಗೂ ತೃತೀಯ ಬಹುಮಾನ ರೂ. 1,000 ಗಳನ್ನು ನೀಡಿ ಅವರ ಕಲಾಪ್ರತಿಭೆಯನ್ನು ಪ್ರೋತ್ಸಾಹಿಸಲಾಯಿತು ಹಾಗೂ ಅಂದೇ ಸಾರ್ವಜನಿಕರಿಗೆ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿಗಳನ್ನು ಉಚಿತವಾಗಿ ವಿತರಿಸಲಾಯಿತು. ಕಾರ್ಯಕ್ರಮಕ್ಕೆ ಅನೇಕ ಸ್ಥಳೀಯ ನಿವಾಸಿಗಳು ತಮ್ಮ ಮಕ್ಕಳೊಡನೆ ಪಾಲ್ಗೊಂಡು, ಕಾರ್ಯಕ್ರಮ ಯಶಸ್ವಿಯಾಗಲು ಸಹಕರಿಸಿದರು. ಸ್ಪರ್ಧೆಯಲ್ಲಿ ಈ ಕೆಳಕಂಡ ಮಕ್ಕಳು ವಿಜೇತರಾದರು:- 1. ಪ್ರಥಮ ಬಹುಮಾನ ರೂ. 5,000 ಪಡೆದವರು: ಪಲ್ಲವಿ 2. ದ್ವಿತೀಯ ಬಹುಮಾನ ರೂ.2,500 ಪಡೆದವರು: ಸೃಜನ್ 3. ಮೂರನೇ ಬಹುಮಾನ ರೂ. 1,000 ಪಡೆದವರು: ಅಯಲಪ್ಪ ರಮೇಶ ಎಂ.ಎಚ್. ನಿರಾತಂಕ ಹೆಚ್ಚಿನ ಮಾಹಿತಿಗಾಗಿ: www.rameshniratanka.com
0 Comments
Leave a Reply. |
Categories
All
RAMESHA NIRATANKA ಉಲ್ಲಾಳು ವಾರ್ಡಿನ ಸಮಸ್ತ ನಾಗರೀಕರನ್ನು ಒಂದೇ ವೇದಿಕೆಯಡಿಯಲ್ಲಿ ತರಲು ಪ್ರಯತ್ನಿಸಲಾಗುತ್ತಿದೆ. ಈಗಾಗಲೇ ಸಮಾಜದ ವಿವಿಧ ಕ್ಷೇತ್ರದ 50,000 ಕ್ಕೂ ಹೆಚ್ಚು ಸದಸ್ಯರು ನಿರಾತಂಕ ಸ್ವಯಂ ಸೇವಾ ಸಂಸ್ಥೆಯೊಂದಿಗೆ ಒಡನಾಟದಲ್ಲಿದ್ದಾರೆ. ಹಲವಾರು ಸಮಾಜ ಸೇವಾ ಕಾರ್ಯಗಳಲ್ಲಿ ನಿರಾತಂಕ ಸಂಸ್ಥೆಗೆ ಬೆಂಬಲವನ್ನು ನೀಡುತ್ತಿದ್ದಾರೆ. ತಾವೂ ಕೂಡ ನಮ್ಮೊಂದಿಗೆ ಕೈ ಜೋಡಿಸಲು ಮತ್ತು ಬೆಂಬಲಿಸಲು “8088433026” ನಂಬರ್‌ಗೆ “NIRATHANKA” ಎಂದು ಸಂದೇಶವನ್ನು ಕಳುಹಿಸಿಕೊಡಬಹುದು.
|