ಸಮಾಜಕಾರ್ಯ ಅಧ್ಯಾಪನದಿಂದ ನಿವೃತ್ತಿ ಹೊಂದಿಯೇ ಹದಿನಾರು ವರ್ಷಗಳು ಉರುಳಿದವು. ನನ್ನ ಜೀವನವನ್ನು ಸಿಂಹಾವಲೋಕನ ಮಾಡಿದರೆ ಕಾಣುವುದೇನು? ಸಮಾಜಕಾರ್ಯದ ಮತ್ತು ನನ್ನ ಜೀವನಾನುಭವದ ಹೆಜ್ಜೆಗುರುತುಗಳೇನು? ಈ ಪ್ರಶ್ನೆಗಳ ಸುತ್ತಲೇ ತಿರುಗುತ್ತಿರುವ ಸ್ಥೂಲಾವಲೋಕನ ಈ ಮುಂದಿನದ್ದು.
ಪ್ರವೇಶ ಆಕಸ್ಮಿಕ ಸಮಾಜಕಾರ್ಯಕ್ಕೆ ನಾನು ಪ್ರವೇಶಿಸಿದ್ದು ಆಶ್ಚರ್ಯಕರ ರೀತಿಯಲ್ಲಿ, ಬಹುಶಃ ನನ್ನ ಅರಿವಿಲ್ಲದಂತೆಯೇ' ಗುರುತಿಸಬಹುದಾದರೆ ಸದಾಶಯ ಹೊಂದಿದ್ದ ಹಿರಿಯರೊಬ್ಬರ ಸಲಹೆ ಸೂಚನೆಯ ಮೇರೆಗೆ, ಕನ್ನಡ ಸಾಹಿತ್ಯದ ಆರಾಧಕ ಅಥವಾ ಕೃಷಿಕ ಆಗಬೇಕು ಎಂಬುದು ನನ್ನ ಅಪೇಕ್ಷೆಯಾಗಿತ್ತು. ಪ್ರೌಢಶಾಲೆಯಲ್ಲಿ ಓದುತ್ತಿದ್ದಾಗಲೇ ಕನ್ನಡ ಭಾಷೆ ಮತ್ತು ಸಾಹಿತ್ಯದಲ್ಲಿ ಆಸಕ್ತಿಯನ್ನು ಬೆಳೆಸಿಕೊಂಡು, ಕವನ ಪ್ರಬಂಧ ರಚನೆಯಲ್ಲಿ ತೊಡಗಿದ್ದು, ಕನ್ನಡ ಸಾಹಿತ್ಯ ಕೃತಿಗಳನ್ನೇ ಓದುವುದರಲ್ಲಿ ಹೆಚ್ಚಿನ ಆಸಕ್ತಿ, ಆಸ್ಥೆಯನ್ನು ತಳೆದಿದ್ದೆ. ಅಂದಿನ ಮದ್ರಾಸು ಪ್ರಾಂತ್ಯಕ್ಕೆ ಎಸ್.ಎಸ್.ಎಲ್.ಸಿ., ಪರೀಕ್ಷೆಯಲ್ಲಿ ಕನ್ನಡದಲ್ಲಿ ಪ್ರಥಮ ಸ್ಥಾನ ಪಡೆದಿದ್ದೆ. ನನ್ನ ಗುರುಗಳೂ ನನಗೆ ಪ್ರೋತ್ಸಾಹದ ನೆರವು ನೀಡುತ್ತಿದ್ದರು. ಇದೂ ನನ್ನ ಕನ್ನಡ ದುಡಿಮೆಗೆ ಒತ್ತಾಸೆಯಾಯ್ತು. (ಆರ್ಥಿಕ ಅನನುಕೂಲ ಮತ್ತು ಇತರ ತೊಂದರೆಗಳ ಕಾರಣದಿಂದ ಒಂದು ವರ್ಷ ನನ್ನ ಶಿಕ್ಷಣವನ್ನು ಮುಂದುವರಿಸಲು ಸಾಧ್ಯವಾಗದಿದ್ದುದರಿಂದ ಪತ್ರಿಕೋದ್ಯಮಿಯಾಗಿ ಹುಬ್ಬಳ್ಳಿ, ದಾವಣಗೆರೆ ನಗರಗಳಲ್ಲಿ ಕೆಲಸ ಮಾಡಬೇಕಾಯ್ತು) ಪ್ರೌಢಶಾಲಾ ಶಿಕ್ಷಣದ ನಂತರ ನನ್ನ ಅಣ್ಣ ಹಿ.ಮ. ನಾಗಯ್ಯನವರ ಸಹಾಯದಿಂದ ಮೈಸೂರಿನ ಸೇಂಟ್ ಫಿಲೋಮಿನಾ ಕಾಲೇಜಿನಲ್ಲಿ ಇಂಟರ್ ಮೀಡಿಯಟ್ ಸೇರಿದೆ. ಅಲ್ಲಿ ಓದುವಾಗ ಪ್ರೊ. ಕೆ.ಎಸ್. ಕೃಷ್ಣಮೂರ್ತಿ, ಪ್ರೊ. ಗೋಪಾಲಕೃಷ್ಣ ಅಡಿಗ, ಇಂಗ್ಲೆಂಡಿನ ಡೇವಿಡ್ ಹಾರ್ಸ್ ಬರೋ ಇಂಥವರ ನೆರವು ದೊರೆಯಿತು. ಅಲ್ಲಿಯೇ ಕರುಣಾಮಯಿ ಫಾದರ್ ಮುತಡಂ ಕಷ್ಟಕಾಲದಲ್ಲಿ ನೆರವಾದರು. ಆ ಅಧ್ಯಯನ ಕಾಲದಲ್ಲಿಯೇ ಕನ್ನಡದ ಕೃಷಿ ನಡೆದು ಅಂತಿಮ ಪರೀಕ್ಷೆಯಲ್ಲಿ ಒಂಭತ್ತನೆಯ ರ್ಯಾಂಕ್ ಪಡೆದುದಲ್ಲದೆ ಮೈಸೂರು ವಿಶ್ವವಿದ್ಯಾಲಯಕ್ಕೆ ಕನ್ನಡದಲ್ಲಿ ಪ್ರಥಮ ಸ್ಥಾನ ದೊರೆಕಿಸಿಕೊಂಡೆ ಎಂದು ನೆನಪು. ಆದುದರಿಂದಲೂ ಮಹಾರಾಜ ಕಾಲೇಜಿನಲ್ಲಿ ಕನ್ನಡ ಆನರ್ಸ್ ಓದಲು ನನಗೆ ಸಹಜವಾಗಿಯೇ ಅವಕಾಶ ಸಿಕ್ಕಿದುದಲ್ಲದೆ ಮೆರಿಟ್ ಸ್ಕಾಲರ್ಷಿಪ್ ಕೂಡಾ ದೊರೆಯಿತು.
0 Comments
|
Categories
All
RAMESHA NIRATANKA ಉಲ್ಲಾಳು ವಾರ್ಡಿನ ಸಮಸ್ತ ನಾಗರೀಕರನ್ನು ಒಂದೇ ವೇದಿಕೆಯಡಿಯಲ್ಲಿ ತರಲು ಪ್ರಯತ್ನಿಸಲಾಗುತ್ತಿದೆ. ಈಗಾಗಲೇ ಸಮಾಜದ ವಿವಿಧ ಕ್ಷೇತ್ರದ 50,000 ಕ್ಕೂ ಹೆಚ್ಚು ಸದಸ್ಯರು ನಿರಾತಂಕ ಸ್ವಯಂ ಸೇವಾ ಸಂಸ್ಥೆಯೊಂದಿಗೆ ಒಡನಾಟದಲ್ಲಿದ್ದಾರೆ. ಹಲವಾರು ಸಮಾಜ ಸೇವಾ ಕಾರ್ಯಗಳಲ್ಲಿ ನಿರಾತಂಕ ಸಂಸ್ಥೆಗೆ ಬೆಂಬಲವನ್ನು ನೀಡುತ್ತಿದ್ದಾರೆ. ತಾವೂ ಕೂಡ ನಮ್ಮೊಂದಿಗೆ ಕೈ ಜೋಡಿಸಲು ಮತ್ತು ಬೆಂಬಲಿಸಲು “8088433026” ನಂಬರ್ಗೆ “NIRATHANKA” ಎಂದು ಸಂದೇಶವನ್ನು ಕಳುಹಿಸಿಕೊಡಬಹುದು.
|